ಸುಳ್ಯದ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ಬಿವೈ ವಿಜಯೇಂದ್ರ

Krishnaveni K

ಶನಿವಾರ, 17 ಮೇ 2025 (16:47 IST)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ  ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವಾ ಕಾರ್ಯದಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ  ವಿಜಯೇಂದ್ರ ಭಾಗಿಯಾಗಿದ್ದಾರೆ.

ದೈವದ ಆಶೀರ್ವಾದ ಪಡೆದ ಬಳಿಕ "ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕತಿಕ ಹೊನ್ನ ಕಲಶವಿದ್ದಂತೆ" ಎಂದು ಬಿ.ವೈ.ವಿಜಯೇಂದ್ರ ಅವರು ಇಂದು ತಿಳಿಸಿದರು.

ತುಳುನಾಡಿನ ಆರಾಧನಾ ಪರಂಪರೆಯಲ್ಲಿ ದೈವದ ಆರಾಧನೆಗೆ ಪರಮಪವಿತ್ರ ಆಚರಣೆಯಲ್ಲಿ ರಾಷ್ಟ್ರದ ಅಭಿವೃದ್ಧಿ ಹಾಗೂ ಸುಭದ್ರತೆಗಾಗಿ ಮೂರನೇ ಬಾರಿ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರು ಪ್ರಧಾನಿಗಳಾಗಿ ಆಯ್ಕೆಯಾಗಲೆಂದು ನಮ್ಮ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಿದ್ದರು. ಈ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತುಂಬಿಲಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾದೆವು. ಶ್ರೀ ದೈವದ ಪ್ರಸಾದವನ್ನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ತಲಿಪಿಸಲಿದ್ದೇವೆ ಎಂದು ತಿಳಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಬಿಜೆಪಿ ನಾಯಕರು ವಿಜಯೇಂದ್ರಗೆ ಸಾಥ್ ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ