ವರುಣಾದಲ್ಲಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸಲ್ಲ!
ಮೈಸೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಎಸ್ ವೈ ಮತ್ತು ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ವಿಜಯೇಂದ್ರ ಬದಲು ಬೇರೆ ಅಭ್ಯರ್ಥಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಇಂದು ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದ್ದು, ವಿಜಯೇಂದ್ರಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರಿಂದ ವ್ಯಾಪಕ ಒತ್ತಾಯ ಕೇಳಿಬಂದಿತ್ತು. ನಿನ್ನೆ ಸಂಜೆ ಮೈಸೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿತ್ತು. ಹಾಗಿದ್ದರೂ ವಿಜಯೇಂದ್ರಗೆ ಟಿಕೆಟ್ ನೀಡದೇ ಇರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.