ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ ಕಾಂಗ್ರೆಸ್ ಎಂದ ಅವರು, ಗಾಂಧೀಜಿ ಮತ್ತು ಅಂಬೇಡ್ಕರರ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷದವರಿಗೆ ಈ ದೇಶದ ಬಗ್ಗೆ, ಅಖಂಡತೆ, ಸಮಗ್ರತೆ ಬಗ್ಗೆ ಬದ್ಧತೆ ಇಲ್ಲ. ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ಸಿಗರೇ ಮಾಡಿದ್ದಾರೆ ಎಂದು ಹೇಳಿದರು. ಬಾಬಾ ಸಾಹೇಬರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಪಂಚತೀರ್ಥಗಳನ್ನಾಗಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿರುವುದು ಸರಿಯಲ್ಲ ಎಂದು ತಿಳಿಸಿದರು. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ. ವಿಧಾನಸಭೆ- ವಿಧಾನಪರಿಷತ್ತಿನ ಸದಸ್ಯರು ಇದರಲ್ಲಿ ಭಾಗವಹಿಸುವರು ಎಂದು ತಿಳಿಸಿದರು.