ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂದು ನನಗಂತೂ ಅರ್ಥ ಆಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು. ಗಮನಿಸುತ್ತ ಹೋದರೆ, ಈ ಸರಕಾರದ ಒಂದೊಂದು ನಿರ್ಣಯವೂ ಪ್ರಜಾಪ್ರಭುತ್ವವನ್ನು ಅಣಕಿಸುವ ರೀತಿಯಲ್ಲಿದೆ. ಇದು ಖಂಡಿತ ಸರಿಯಲ್ಲ ಎಂದು ನುಡಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಜಯಘೋಷ ಕೂಗುವುದಕ್ಕೆ ಕಡಿವಾಣ ಹಾಕಲು ಈ ಅಯೋಗ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ; ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದರೂ ಪುರಾವೆಗಳಿಲ್ಲವೆಂದು ತಿಳಿಸಿದ್ದರು. ಅಂಥ ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಲು ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಖಂಡಿಸಿದರು. ಈಗ ಸಚಿವರ ಕಚೇರಿಯಲ್ಲಿ ಕಳ್ಳತನದ ನೆಪವೊಡ್ಡಿ ಈ ರೀತಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎಂದ ಅವರು, ಈ ಕುರಿತ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದರು.