ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಈಗಾಗಲೇ ಕುಟುಂಬ ಸಮೇತ ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಇಂದು ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಗಂಗಾ ನದಿಗಿಳಿದು ಪುಣ್ಯ ಸ್ನಾನ ಮಾಡಿ ಗಂಗೆಗೆ ಪ್ರಾರ್ಥನೆ ನಡೆಸಿದ್ದಾರೆ.
ದೆಹಲಿ ಪ್ರವಾಸದಲ್ಲಿ ವಿಜಯೇಂದ್ರ ವರಿಷ್ಠರನ್ನು ಭೇಟಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೆಲ್ಲವೂ ಸುಳ್ಳಾಗಿದೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿರುವಾಗ ವಿಜಯೇಂದ್ರ ದೆಹಲಿ ಪ್ರವಾಸ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.
ಆದರೆ ಅವರು ಇದುವರೆಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಪ್ರಯತ್ನವನ್ನೂ ಮಾಡಲಿಲ್ಲ. ಇದು ವೈಯಕ್ತಿಕ ಭೇಟಿ ಎನ್ನಲಾಗಿದೆ. ಈ ನಡುವೆ ಕುಂಭಮೇಳದಿಂದ ಅವರು ಬೆಂಗಳೂರಿಗೆ ಬಂದು ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ.