ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿಯಿದ್ದ ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಮುಟ್ಟುಗೋಲು ಹಾಕಲು ಸೂಚನೆ ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ವಿಷ್ಣುವರ್ಧನ್ ಸಮಾಧಿಯನ್ನು ಮೊನ್ನೆಯಷ್ಟೇ ಅಭಿಮಾನ್ ಸ್ಟುಡಿಯೋ ಜಾಗದ ಮಾಲಿಕರಾದ ಹಿರಿಯ ನಟ ಬಾಲಣ್ಣ ಕುಟುಂಬದವರು ರಾತ್ರೋ ರಾತ್ರಿ ಕೆಡವಿದ್ದರು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದದ ನಡುವೆಯೇ ಈಗ ಸರ್ಕಾರವೇ ಈ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿರುವುದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ.
ವಿಷ್ಣು ಸಮಾಧಿ ಬಗ್ಗೆ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದು ಕನ್ನಡದ ಪ್ರತಿಭಾವಂತ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ನಿರಂತರ ವಿವಾದದಲ್ಲಿ ಸಿಲುಕಿಕೊಂಡಿದ್ದು ನಿಜಕ್ಕೂ ಬೇಸರದ ಸಂಗತಿ.
ವಿಷ್ಣು ಅವರ ಹಾಗೂ ಹಿರಿಯ ನಟ ಟಿ ಎನ್ ಬಾಲಕೃಷ್ಣ ಅವರ ಸಮಾಧಿ ಸ್ಥಳಗಳು ಸ್ಮಾರಕಗಳಾಗಿ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಶೀಘ್ರ ನಿರ್ಮಾಣವಾಗಲಿ. ಅರಣ್ಯ ಭೂಮಿ ಎಂದು ಸದ್ಯ ಅಭಿಮಾನ್ ಸ್ಟುಡಿಯೋ ಜಾಗವದನ್ನು ವಶಪಡಿಸಿಕೊಳ್ಳಲು ಹೊರಟಿರುವ ಸರ್ಕಾರದ ನಿರ್ಧಾರ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೊಂದು ಗೊಂದಲವಾಗಿ ಮಾರ್ಪಡದಿರಲಿ. ಅಭಿಮಾನಿಗಳ ಮನಸ್ಸನ್ನು ಘಾಸಿಗೊಳಿಸದಂತೆ ಸರ್ಕಾರ ನಡೆದುಕೊಳ್ಳಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.