ಬೈ ಎಲೆಕ್ಷನ್: ಮಠಾಧೀಶರ ಭೇಟಿಗೆ ಕಾಂಗ್ರೆಸ್-ಬಿಜೆಪಿ ಬಿಗ್ ಫೈಟ್
ಭಾನುವಾರ, 12 ಮೇ 2019 (13:04 IST)
ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಠಾಧೀಶರನ್ನ ಭೇಟಿ ಮಾಡಿದ ಬೆನ್ನಲ್ಲೇ ಕೈ ಪಡೆ ಮಠಾಧೀಶರ ಭೇಟಿಗೆ ಮುಂದಾಗಿದೆ.
ಬಿ.ಎಸ್. ಯಡಿಯೂರಪ್ಪ ಮಠಾಧೀಶರನ್ನು ಭೇಟಿ ಮಾಡಿದ ಬೆನ್ನಲ್ಲೆ, ಇದೀಗ ಗೃಹ ಸಚಿವ ಎಂ.ಬಿ. ಪಾಟೀಲ್‌ರಿಂದ ವಿವಿಧ ಮಠಾಧೀಶರ ಭೇಟಿ ನಡೆಯುತ್ತಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ್ ನಲ್ಲಿ ವಿವಿಧ ಮಠಾಧೀಶರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ ಎಂ.ಬಿ. ಪಾಟೀಲ್ ಹಾಗೂ ಈಶ್ವರ ಖಂಡ್ರೆ.
ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವಿರೇಶ್ವರ ಸಂಸ್ಥಾನಕ್ಕೂ ಭೇಟಿ ನೀಡಿದ್ದಾರೆ ಎಂ.ಬಿ. ಪಾಟೀಲ್.
ಚಿಂಚೋಳಿ ಉಪಾಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವೊಲಿಸುತ್ತಿದ್ದಾರೆ ನಾಯಕರು.
ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಮತಗಳನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದೆ.
ಕಳೆದೆರಡು ದಿನಗಳ ಹಿಂದೆ ವಿವಿಧ ಮಠಾಧೀಶರುಗಳೊಂದಿಗೆ ಸಭೆ ನಡೆಸಿದ್ದರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ.