ಉಪಚುನಾವಣೆ ಪ್ರಚಾರ: ಜೆಡಿಎಸ್ ಬಂಡಾಯ ಶಾಸಕರಲ್ಲಿಯೇ ಭಿನ್ನಮತ

ಶುಕ್ರವಾರ, 7 ಏಪ್ರಿಲ್ 2017 (13:24 IST)
ಉಪಚುನಾವಣೆಯಲ್ಲಿ ಬಹಿರಂಗವಾಗಿ ಕಾಂಗ್ರೆಸ್ ಪರ ಪ್ರಚಾರ ಮಾಡುವ ಕುರಿತಂತೆ ಜೆಡಿಎಸ್ ಬಂಡಾಯ ನಾಯಕರಲ್ಲಿಯೇ ಭಿನ್ನಮತ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಪಕ್ಷದ ಹೈಕಮಾಂಡ್‌ನಿಂದ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದ್ದರಿಂದ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುವುದು ಸರಿಯಲ್ಲ ಎಂದು ಜೆಡಿಎಸ್‌ನ ಕೆಲ ಬಂಡಾಯ ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಭಿನ್ನಮತ ಎದುರಾಗಿದೆ.
 
ಜೆಡಿಎಸ್ ಬಂಡಾಯ ಶಾಸಕರಲ್ಲಿ ಒಮ್ಮತ ಮೂಡ ಹಿನ್ನೆಲೆಯಲ್ಲಿ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಅಜ್ಮೀರ್ ದರ್ಗಾಗೆ ತೆರಳಿದರು ಎನ್ನಲಾಗಿದೆ.
 
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ದೊರೆಯುವ ಬಗ್ಗೆ ಹೈಕಮಾಂಡ್ ಸ್ಪಷ್ಟ ನಿಲುವು ತಳೆಯದಿರುವುದು ಜೆಡಿಎಸ್ ಬಂಡಾಯ ಶಾಸಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ