ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ

ಶುಕ್ರವಾರ, 7 ಏಪ್ರಿಲ್ 2017 (18:00 IST)
ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕ್ಷೇತ್ರ ಬಿಟ್ಟು ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಏ.9 ರಂದು ಚುನಾವಣೆ ನಡೆಯಲಿದ್ದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಆದಾಗ್ಯೂ, ಅಭ್ಯರ್ಥಿಗಳು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ.
 
ಚುನಾವಣೆ ನೀತಿ ಸಂಹಿತೆಯಂತೆ ಕ್ಷೇತ್ರಗಳ ನಿವಾಸಿಗಳಲ್ಲದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಕ್ಷೇತ್ರದಿಂದ ನಿರ್ಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳಿದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
 
ಉಭಯ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದ್ದು, ಮತದಾರ ಯಾವ ಪಕ್ಷದ ಕೊರಳಿಗೆ ವಿಜಯ ಮಾಲೆ ಹಾಕಲಿದ್ದಾನೆ ಎನ್ನುವುದನ್ನು ಕಾದು ನೋಡಬೇಕಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ