ಬರ, ಕುಡಿಯುವ ನೀರಿನ ಸಮಸ್ಯೆ ಇದ್ದರೂ ಸರಕಾರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಸರಕಾರ ಸತ್ತಿದೆ ಎಂದು ಬಿ.ವೈ.ವಿಜಯೇಂದ್ರ ದೂರಿದ್ದಾರೆ.
ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಯಾದಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಯುವ ಮೋರ್ಚಾದಿಂದ ರಾಜ್ಯ ಪ್ರವಾಸ ಮಾಡಿ ಸಂಘಟನೆ ಮಾಡಲಾಗುತ್ತಿದೆ. ರಾಜ್ಯ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಇದೊಂದು ಎಚ್.ಆರ್. ಕೆ. ಪ್ರೈವೇಟ್ ltd ಸರಕಾರವಾಗಿದೆ.
ಮೈಸೂರು ಭಾಗಕ್ಕೆ ಮಾತ್ರ ಸೀಮಿತವಾಗಿದೆ ಎಂದರು.
ಸಿಎಂ ಎಚ್.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಘೋಷಣೆ ಮಾಡಿದರು. ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಿಲ್ಲ. ರೈತರಿಗೆ ಹೊಸ ಸಾಲ ಸಿಕ್ಕಿಲ್ಲ ಸಾಲ ಮನ್ನಾ ಭಾಗ್ಯ ಸಿಕ್ಕಿಲ್ಲ ಎಂದರು.
ಸಂಪುಟ ವಿಸ್ತರಣೆಯಲ್ಲಿ ಯೋಗ್ಯತೆ ಇಲ್ಲದವರನ್ನು ಸಚಿವ ಸ್ಥಾನ ಕೊಡುತ್ತಿದ್ದಾರೆ. ರಾಜ್ಯ ಸರಕಾರ ಜನರಿಗೆ ತಟ್ಟಿದ ಶಾಪವಾಗಿದೆ ಎಂದರು.