ರಾಜ್ಯದಲ್ಲಿ 1,020 ಹೊಸ ಬಸ್ ಖರೀದಿಸಲು ಸಚಿವ ಸಂಪುಟ ಅನುಮೋದನೆ
ರಾಜ್ಯದ ವಿವಿಧ ಸಾರಿಗೆ ನಿಗಮಗಳಿಗೆ 1,020 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪೈಕಿ 320 ಎಲೆಕ್ಟ್ರಿಕ್ ಬಸ್ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 150 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಖರೀದಿಸಲಿದೆ.ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ 320 ಬಸ್ಗಳನ್ನು ಒಟ್ಟು ವೆಚ್ಚ ಗುತ್ತಿಗೆ ಹಣಕಾಸು ಮಾದರಿಯಲ್ಲಿ ಖರೀದಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 150 ಕೋಟಿ ರೂ.ಗಳ ವೆಚ್ಚದಲ್ಲಿ 350 ಬಸ್ಸುಗಳು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳನ್ನು ಖರೀದಿಸಲಾಗುವುದು ಎಂದಿದ್ದಾರೆ