ಸಚಿವ ಸಂಪುಟ ವಿಸ್ತರಣೆ ಹಿನ್ನಲೆ; ಬಿಜೆಪಿಯಲ್ಲಿ ಬುಗಿಲೆದ್ದಿದೆ ಅಸಮಾಧಾನ

ಮಂಗಳವಾರ, 20 ಆಗಸ್ಟ್ 2019 (10:19 IST)
ಬೆಂಗಳೂರು : ಬಿಜೆಪಿ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲೇ ಇದೀಗ ಬಿಜೆಪಿಯಲ್ಲಿ ಅಸಮಾಧಾನ ಬುಗಿಲೆದ್ದಿದೆ ಎಂಬುದಾಗಿ ತಿಳಿದುಬಂದಿದೆ.
ಸುರಪುರ ಬಿಜೆಪಿ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದ್ದು, ರಾಜುಗೌಡರು ತಮ್ಮ ಬೆಂಬಲಿಗರ ಜೊತೆ ಹೋಟೆಲ್ ನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನಲಾಗಿದೆ.


ಇನ್ನು ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿ, ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸದ ಬಳಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದು, ಸಚಿವ ಸ್ಥಾನ ತಮಗೆ ಸಿಗದಿರುವುದರಿಂದ ಬೇಸರವಾಗಿದೆ. ಆದರೆ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ