ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ; ಈ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ ಏನು?
ಶನಿವಾರ, 22 ಡಿಸೆಂಬರ್ 2018 (11:03 IST)
ಹುಬ್ಬಳ್ಳಿ : ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯ ಕೊನೆಗೂ ಅಂತ್ಯವಾಗಿದ್ದು, ಕಾಂಗ್ರೆಸ್ ನ 8 ಶಾಸಕರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ‘ಸಂಪುಟ ವಿಸ್ತರಣೆಗಾಗಿ 3 ತಿಂಗಳು ಕಾಲಹರಣ ಮಾಡಿದ್ದಾರೆ. ಸಂಪುಟ ವಿಸ್ತರಣೆ ನಂತರ ಈಗ ಅಸಮಾಧಾನ ಭುಗಿಲೇಳಲಿದೆ. ರಮೇಶ್ ಜಾರಕಿಹೊಳಿ ಕೈ ಬಿಟ್ಟಿದ್ದು, ಸಾಕಷ್ಟು ಪರಿಣಾಮ ಬೀರಲಿದೆ. ಸಾಯಂಕಾಲದೊಳಗೆ ಸಾಕಷ್ಟು ಬದಲಾವಣೆ ಆಗಲಿದೆ’ ಎಂದು ಹೇಳಿದ್ದಾರೆ.
‘ರಾಜ್ಯಪಾಲರಿಲ್ಲ, ಇವತ್ತು ಪ್ರಮಾಣ ವಚನ ಆಗುವುದು ಸಂಶಯ. ಸಂಜೆಯವರೆಗೆ ಏನಾಗುತ್ತೆ ಕಾದು ನೋಡೋಣ. ನಾವು 104 ಜನ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇವೆ. ಅಸಮಾಧಾನ ಭುಗಿಲೆದ್ದ ಮೇಲೆ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ