ಅ.10ರಂದು ಸಚಿವ ಸಂಪುಟ ವಿಸ್ತರಣೆ
ಬಹುನಿರೀಕ್ಷಿತ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಅಕ್ಟೊಬರ್ 10 ಅಥವಾ 12ರಂದು ವಿಸ್ತರಣೆಯಾಗುವುದು ಬಹುತೇಕ ಪಕ್ಕಾ ಆಗಿದೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಬದಲಾವಣೆ ಕುರಿತಂತೆ ಸಿದ್ಧತೆ ನಡೆದಿದೆ. ಮೈತ್ರಿ ಪಕ್ಷವಾದ ಕಾಂಗ್ರೆಸ್ ನಾಯಕರ ಜತೆಗೆ ಚರ್ಚೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟದಲ್ಲಿ ಖಾಲಿ ಇರುವ ಎಲ್ಲ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ.