ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಆಕಾಂಕ್ಷಿಗಳ ದಂಡು
ಶುಕ್ರವಾರ, 14 ಏಪ್ರಿಲ್ 2017 (11:38 IST)
ಉಪಚುನಾವಣೆಯ ಭರ್ಜರಿ ಗೆಲುವಿನಿಂದ ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿಯಿರುವ ಎರಡು ಸ್ಥಾನಗಳನ್ನು ತುಂಬಲು ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿ ತಿಳಿದ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು ಕೂಡಾ ಪ್ರತ್ಯೇಕವಾಗಿ ದೆಹಲಿಗೆ ತೆರಳಲು ನಿರ್ಧರಿಸಿದೆ ಎನ್ನಲಾಗಿದೆ. ಹೈಕಮಾಂಡ್ ಮೂಲಕ ಲಾಬಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಡಾ. ಬಿ. ಆರ್. ಅಂಬೇಡ್ಕರ್‌ರ 126 ನೇ ಜಯಂತಿ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.