362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಸಮ್ಮತಿ

ಬುಧವಾರ, 1 ಮಾರ್ಚ್ 2017 (16:08 IST)
362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಸಮ್ಮತಿ ಸೂಚಿಸಿದ್ದರಿಂದ ಕಳೆದ ಆರು ವರ್ಷಗಳಿಂದ ಪರದಾಡುತ್ತಿದ್ದ ಅಭ್ಯರ್ಥಿಗಳಿಗೆ ನಿರಾಳತೆ ದೊರೆತಂತಾಗಿದೆ..
 
ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಪ್ರೊಬೇಷನರಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ದೊರೆತಿದ್ದರಿಂದ ಅಭ್ಯರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
 
ಅಭ್ಯರ್ಥಿಗಳು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸರಕಾರ ನಮಗೆ ಹೊಸ ಜೀವನನ್ನು ನೀಡಿದ್ದು, ಉತ್ತಮ ಕೆಲಸ ನಿರ್ವಹಿಸಿ ನಮ್ಮನ್ನು ನೇಮಕ ಮಾಡಿದ್ದರ ಋುಣವನ್ನು ತೀರಿಸುತ್ತೇವೆ ಎಂದು ಭಾವುಕರಾಗಿ ತಿಳಿಸಿದ್ದಾರೆ. 
 
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಯಚಂದ್ರ, ಸಚಿವ ಸಂಪುಟದಲ್ಲಿ 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಸಮ್ಮತಿ ಸೂಚಿಸಲಾಗಿದೆ. ಇದರ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
 
ಕಳೆದ ಆರು ವರ್ಷಗಳ ಹಿಂದೆ ಅಂದರೆ 2011ರಲ್ಲಿ ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಕಾರಣಕ್ಕೆ 362 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿಯನ್ನು ಸರಕಾರ ರದ್ದುಗೊಳಿಸಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ