ಸಂಪುಟ ಪುನಾರಚನೆ: ಸಿಎಂ ಸಿದ್ದರಾಮಯ್ಯರಿಂದ ದಿಗ್ವಿಜಯ್ ಸಿಂಗ್ ಭೇಟಿ

ಶುಕ್ರವಾರ, 17 ಜೂನ್ 2016 (12:50 IST)
ಸಂಪುಟ ಪುನಾರಚನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಉಸ್ತುವಾರಿ ಹೊತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈ ಬಿಡಬೇಕು ಎನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ದಿಗ್ವಿಜಯ್ ಸಿಂಗ್ ಅವರ ನಡುವೆ ಸುದೀರ್ಘ ಚರ್ಟೆ ನಡೆದಿದೆ ಎನ್ನಲಾಗಿದೆ.
 
ಸಚಿವ ಸಂಪುಟದಲ್ಲಿ ಅಸಮರ್ಥ ಸಚಿವರು ಯಾರು ಇಲ್ಲ. ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ, ಮುಂದಿನ ಎರಡು ವರ್ಷಗಳಲ್ಲಿ ವಿಧಾನಸಭೆಗೆ ಚುನಾವಣೆ ಎದುರಾಗಲಿರುವುದರಿಂದ ಪಕ್ಷದ ಸಂಘಟನೆಗಾಗಿ ಕೆಲವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಅನಾಮಧೇಯ ನಾಯಕರುಗಳು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಕಾಂಗ್ರೆಸ್ ಪಕ್ಷದ ಅಧಿನಾಯಿಕ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದು, ನಂತರ ಸಂಪುಟ ಪುನಾರಚನೆಯ ಬಗ್ಗೆ ಅಂತಿಮ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ