ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ- ಸಚಿವ ವೆಂಕಟರಾವ್ ನಾಡಗೌಡ

ಬುಧವಾರ, 9 ಜನವರಿ 2019 (12:22 IST)
ಕಾರವಾರ : ಮಲ್ಪೆ ಮೀನುಗಾರರ  ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೀನುಗಾರರ ಪತ್ತೆಗೆ ಇಸ್ರೋ ನೆರವು ಕೋರಲಾಗಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ನಾಪತ್ತೆಯಾಗಿರುವ ಮೀನುಗಾರರ ಮನೆಗೆ ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಸುದ್ಧಿಗಾರರೊಂದಿಗೆ  ಮಾತನಾಡಿದ ಅವರು,’ ಡಿಸೆಂಬರ್ 13ರಂದು ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಈ ಸಂಬಂಧ ಉಪಗ್ರಹ ಮೂಲಕ ಪತ್ತೆಗೆ ಇಸ್ರೋಗೂ ಮನವಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

 

ಹಾಗೇ ‘ಮೀನುಗಾರರ ಪತ್ತೆಗಾಗಿ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಫಲ ಸಿಕ್ಕಿಲ್ಲ. ರಾಜ್ಯ ಸರ್ಕಾರದಿಂದ ಸ್ಥಳೀಯ ಮೀನುಗಾರರ ಸಹಕಾರ ಪಡೆದು ಎಲ್ಲ ಬಂದರುಗಳೂ ಸೇರಿದಂತೆ ಶಂಕಾಸ್ಪದ ಸ್ಥಳಗಳಲ್ಲಿ ಪತ್ತೆ ಕಾರ್ಯ ನಡೆಸಲಾಗಿದೆ. ಸಮುದ್ರದಲ್ಲೂ ಕೂಡ ಹೆಲಿಕಾಪ್ಟರ್ ಮತ್ತು ತಟ ರಕ್ಷಣಾ ಪಡೆಗಳ ಮೂಲಕ ಪತ್ತೆಗೆ ಪ್ರಯತ್ನಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ