ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ

ಬುಧವಾರ, 19 ಫೆಬ್ರವರಿ 2020 (10:40 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಪ್ರತಿಭಟನೆಗೆ ಕರೆ ಹಿನ್ನಲೆ ನಾಳೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ರೋಡಿಗಿಳಿಯೋದು ಅನುಮಾನ ಎನ್ನಲಾಗಿದೆ.


ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ  ಸರ್ಕಾರಿ ಸಾರಿಗೆ ನೌಕರರು ತಮ್ಮ ಪತ್ನಿ ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಿದ್ದಾರೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಸತ್ಯಾಗ್ರಹ ನಡೆಯಲಿದ್ದು, ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.


ಹಾಗೇ ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬರುವಂತೆ ಆಗ್ರಹಿಸಿದ ನೌಕರರು,  ಸವದಿ ಸ್ಥಳಕ್ಕೆ ಬಾರದಿದ್ರೆ ಅಹೋರಾತ್ರಿ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂದು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದಿಂದ ಜಾಥಾ ಹೊರಡಲಿದ್ದು,  ಸಂಜೆ 5 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ