ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ
ಸೋಮವಾರ, 10 ಫೆಬ್ರವರಿ 2020 (11:10 IST)
ಕಲಬುರಗಿ : ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಮಾಡಿದ ಖರ್ಚು ವೆಚ್ಚದ ಬಗ್ಗೆ ಲೆಕ್ಕ ಕೊಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ.
ಇತ್ತೀಚೆಗೆ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲಾಗಿತ್ತು. ಆದರೆ ಈ ಸಮ್ಮೇಳನಕ್ಕೆ ಜನರ ತೆರಿಗೆ ಹಣವನ್ನು ನೀಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.
ಈ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾಡಿದ ಖರ್ಚಿನ ಬಗ್ಗೆ ಚರ್ಚೆ ನಡೆಯುತ್ತಿದ್ದು 1 ತಿಂಗಳೊಳಗಾಗಿ ಜಿಲ್ಲಾಡಳಿತ, ಕಸಾಪ ಸಮ್ಮೇಳನಕ್ಕೆ ಬಂದಿರುವ ಹಣ , ಖರ್ಚಿನ ಲೆಕ್ಕ ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗಿದೆ.