ಮತ್ತೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ-ಗೃಹ ಸಚಿವ ಪರಮೇಶ್ವರ್

ಗುರುವಾರ, 21 ಸೆಪ್ಟಂಬರ್ 2023 (18:16 IST)
ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್​​, ಕಾವೇರಿ ವಿಚಾರದಲ್ಲಿ ಸಿಎಂ ಹಾಗೂ ಡಿಸಿಎಂ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ನಮ್ಮಲ್ಲೇ ನೀರಿಲ್ಲ, ಡೆಡ್ ಸ್ಟೋರೇಜ್ 10 ಟಿಎಂಸಿ ನೀರಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದರು. ಪ್ರಾಧಿಕಾರ ಹೇಳಿದಂತೆ ನಾವು ನಡೆದುಕೊಂಡು 15 ದಿನಗಳು ನೀರು ಹರಿಸಿದ್ದೇವೆ. ಆದ್ರೆ ಸದ್ಯ ಈಗ ನಮ್ಮಲ್ಲೇ ನೀರಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಅಭಾವ ಉಂಟಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಮತ್ತೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ