ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ; ಹೈಕೋರ್ಟ್ ಗೆ ಮನವಿ ಸಲ್ಲಿಕೆ

ಗುರುವಾರ, 21 ಮೇ 2020 (09:18 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸದೇ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

 

ಇಡೀ ದೇಶದಾದ್ಯಂತ ಕೊರೊನಾ ಭೀತಿ ಎದುರಾದ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಜೂನ್ 25ರಿಂದ  ಜುಲೈ 4ರವರೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾಮಾಜಿಕ ಅಂತರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
 

ಆದರೆ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸದೇ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ವಕೀಲರ ತಂಡವೊಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರ, ಪಂಜಾಬ್ ಮತ್ತು ಮಧ್ಯಪ್ರದೇಶದಂತೆ  ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ