ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯ ನಿರ್ದೇಶನದ ಪ್ರಕಾರ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲು ತಯಾರಿ ನಡೆಸಿದೆ. ಆದರೆ ಈ ವಾಹನಗಳಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಈ ವಾಹನಗಳನ್ನು ಬೇರೆ ಕಡೆಗಳಲ್ಲಿ ನೋಂದಾಯಿಸಲು ಬಳಸಲಾಗುವುದಿಲ್ಲ.
ಎನ್ ಜಿಟಿ ಪ್ರಕಾರ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿ ಮತ್ತು ಚಾಲನೆಯ ಮೇಲಿನ ನಿರ್ಬಂಧಗಳಿಗೆ ನಿರ್ದೇಶನ ನೀಡಲಾಗಿದೆ. ಜುಲೈ 2016 ರಲ್ಲಿ ಎನ್‌ಜಿಟಿ ನೀಡಿದ ಆದೇಶದಲ್ಲಿ, 10 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ನೋಂದಣಿ ಆದೇಶವನ್ನು ತಪ್ಪದೆ ಜಾರಿಗೊಳಿಸಬೇಕು ಎಂದು ಮತ್ತೊಮ್ಮೆ ತಾಕೀತು ಮಾಡಿದೆ.