ಲೋಕಸಭೆ ಚುನಾವಣೆ ಸೋತ ಕೈ ಅಭ್ಯರ್ಥಿಗಳ ಸಭೆ

ಬುಧವಾರ, 26 ಜೂನ್ 2019 (16:29 IST)
ಲೋಕಸಭೆ ಚುನಾವಣೆಯಲ್ಲಿ ಪರಾಜಯಗೊಂಡಿರುವ ಕೈ ಪಾಳೆಯದ ಅಭ್ಯರ್ಥಿಗಳ ಸಭೆ ನಡೆಯಿತು.

ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಜಿತರಾಗಿರುವಂತಹ ಅಭ್ಯರ್ಥಿಗಳ ಸಭೆ ನಡೆಯಿತು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹಾಗೂ ಸಿ  ಎಲ್ ಪಿ ನಾಯಕ  ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ , ಡಿಸಿಎಂ ಪರಮೇಶ್ವರ್ ಹಾಗೂ ಪರಾಜಿತ ಅಭ್ಯರ್ಥಿಗಳು ಭಾಗಿಯಾಗಿದ್ದರು.

ಬಹು ಮುಖ್ಯವಾಗಿದ್ದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣವೇನು? ಜೆಡಿಎಸ್ ಮೈತ್ರಿಯಿಂದ ಸೋಲಾಯ್ತಾ? ಮೈತ್ರಿ ಇಲ್ಲದೇ ಇದ್ರೆ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಬಹುದಿತ್ತಾ? ಎಂಬೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಯಾಗಿ ಕಟ್ಟುವ ಕುರಿತು ಚರ್ಚೆ ನಡೆಯಿತು. 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ