ಗಸ್ತಿನಲ್ಲಿದ್ದಾಗ ಕಾರು ಡಿಕ್ಕಿ ಹೊಡೆದು ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕೆಂಪನಪುರ ಸಮೀಪ ಮಂಗಳವಾರ ಮಧ್ಯರಾತ್ರಿ ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಪ್ರಸಾದ್ ಮೃತ ದುರ್ದೈವಿ. ASI ರಾಜುಗೆ ಗಂಭೀರ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದಾರೆ. ಕೆಂಪನಪುರ ಗ್ರಾಮದ ಸಮೀಪ ಗಸ್ತು ನಡೆಸುತ್ತಿರುವಾಗ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ.