ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಉರುಳಿ ಬಿದ್ದರೂ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪಾರಾದ ಘಟನೆ ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮದ ಸೇತುವೆ ಬಳಿ ಸಂಭವಿಸಿದೆ.
ಗುರುವಾರ ಬೆಳಿಗ್ಗೆ ಕೊಳ್ಳೇಗಾಲದಿಂದ ಬೆಂಗಳೂರಿಗೆ ಹೋಗುತ್ತಿದ್ದ ಮಾರುತಿ ಸಿಫ್ಟ್ ಕಾರು ನಿಯಂತ್ರಣ ತಪ್ಪಿ ದೊಡ್ಡ ಹಳ್ಳಕ್ಕೆ ಉರುಳಿ ಬಿದ್ದಿದೆ.
ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಕೆ.ಎಂ.ದೊಡ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಂ.ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.