ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸಹೋದರನ ವಿರುದ್ಧ ಕೇಸ್: ರಾಜಕೀಯ ಪ್ರೇರಿತ ಆರೋಪ
ಸ್ಟೋನ್ ಕ್ರಷರ್ ಪ್ರಕರಣದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸಹೋದರನ ವಿರುದ್ಧ ಪ್ರಕರಣ ದಾಖಲಾಗಿರುವುದು ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಎಂಬ ಆರೋಪ ಕೇಳಿಬಂದಿದೆ.
ವೈಯಕ್ತಿಕ ದ್ವೇಷ ಸಾಧನೆಗಾಗಿ ತಮ್ಮ ಸಹೋದರನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಆರೋಪ ಮಾಡಿದ್ದಾರೆ.
ತಮ್ಮ ಸ್ವ ಹಿತಾಸಕ್ತಿಗಾಗಿ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲು ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಒತ್ತಡ ಹಾಕಿ ಕೇಸ್ ದಾಖಲಿಸಿದ್ದಾರೆ ಎಂದು ದೂರಿದರು.
ಕಾಲ ಚಕ್ರ ಹೀಗೆಯೇ ಇರುವುದಿಲ್ಲ. ಕಾಲಚಕ್ರ ಉರುಳುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು
ಶಾಸಕ ಎಂ.ವೈ.ಪಾಟೀಲ್ ಗೆ ನಿತಿನ್ ಗುತ್ತೇದಾರ ಟಾಂಗ್ ನೀಡಿದ್ದಾರೆ.