ಬೆಂಗಳೂರು: ಇಲ್ಲಿನ ಬಾಡಿಗೆ ಮನೆಯಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೆ ಸಂಬಂಧಿಸಿದಂತೆ ಆತನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾರ್ಚ್ 1, ಸೋಮವಾರ ತಿಳಿಸಿದ್ದಾರೆ.
ಮೃತರನ್ನು 40ವರ್ಷದ ಮೋಹನ್ ರಾವ್ ಎಂದು ಗುರುತಿಸಲಾಗಿದೆ. . ಅವರು ಪಿಗ್ಮಿ ಸಂಗ್ರಹಣೆ, ದ್ವಿಚಕ್ರ ವಾಹನಗಳಿಗೆ ಹಣಕಾಸು ಮತ್ತು ಕೆಲವು ಸಣ್ಣ-ಪ್ರಮಾಣದ ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಅವರು ಹೇಳಿದರು.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಫೆಬ್ರವರಿ 27 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಯಾರೋ (ರಾವ್) ಅವರನ್ನು ಕೊಲೆ ಮಾಡಿ ಶವವನ್ನು ಅಲ್ಲೇ ಬಿಟ್ಟು ಹೋಗಿರುವುದು ಕಂಡು ಬಂದಿದ್ದು, ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ವಾಯವ್ಯ ಉಪ ಪೊಲೀಸ್ ಆಯುಕ್ತ ನಾಗೇಶ್ ಡಿ.ಎಲ್ ತಿಳಿಸಿದ್ದಾರೆ.
ತನಿಖೆಯ ಸಮಯದಲ್ಲಿ, ಕೊಲೆಯಲ್ಲಿ ಮೂವರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.