CET ಬರೆಯಲು ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರದ ನಡೆ ವಿರುದ್ಧ ದೂರು ಕೊಟ್ಟ ಅಶೋಕ್‌

Sampriya

ಶುಕ್ರವಾರ, 25 ಏಪ್ರಿಲ್ 2025 (16:21 IST)
Photo Credit X
ಬೆಂಗಳೂರು: CET ಬರೆಯಲು ಬಂದಿದ್ದ ವಿಪ್ರ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಸಂಬಂಧ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಅವರು ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ನಾಗರಿಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿಯನ್ನು ಮಾಡಿ, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

'ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು. ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ' ಎಂದು ಅವರು ಹೇಳಿದರು.

ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ