ಗಂಗಾಧರಯ್ಯ ಮನೆಯಲ್ಲಿ ನಗದು, ಚಿನ್ನ ಪತ್ತೆ
ಬೆಂಗಳೂರಿನಲ್ಲಿ BBMP ADTP ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಗಂಗಾಧರಯ್ಯ ಮನೆಯಲ್ಲಿ ಪರಿಶೀಲನೆ ಮುಂದುವರೆದಿದ್ದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ನಗದು, ಚಿನ್ನಾಭರಣ,ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದೆ. ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಪತ್ತೆಯಾಗಿದ್ದು 80 ಲಕ್ಷ ನಗದು ಹಣ, 50 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.