ನಾಳೆಯಿಂದ ಜಾತಿಗಣತಿ ಶುರು, 33ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಟ್ಟ ಆಯೋಗ

Sampriya

ಭಾನುವಾರ, 21 ಸೆಪ್ಟಂಬರ್ 2025 (15:29 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಸಂಬಂಧ ನೂರಾರು ಗೊಂದಲಗಳ  ಮಧ್ಯೆ ನಾಳೆಯಿಂದ ರಾಜ್ಯದಾದ್ಯಂತ ಜಾತಿಗಣತಿ ಶುರುವಾಗಲಿದೆ. ಇದರ ಮಧ್ಯೆ ಕೈಪಿಡಿಯಲ್ಲಿ ಹಲವು ಅಂಶಗಳಿಗೆ ಕೊಕ್ ನೀಡಲಾಗಿದೆ. ಕ್ರಿಶ್ಚಿಯನ್ ಧರ್ಮದ ಅಡಿಯಲ್ಲಿ ಇದ್ದ 33 ಉಪ ಜಾತಿಗಳು ಡ್ರಾಪ್​ಡೌನ್​ನಿಂದ ತೆಗೆಯುತ್ತಿದ್ದೇವೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುರುವಾಗಲಿದೆ.  ಸ್ವ ಇಚ್ಛೆಯಿಂದ ಜಾತಿ, ಧರ್ಮ ಉಲ್ಲೇಖ ಮಾಡಲು ಅವಕಾಶ ಇದೆ. ಈ ಸಂದರ್ಭದಲ್ಲಿ ಅವರು ಕ್ರಿಶ್ಚಿಯನ್ ಧರ್ಮದ ಅಡಿಯಲ್ಲಿದ್ದ ಒಟ್ಟು 33 ಉಪ ಜಾತಿಗಳನ್ನು ಡ್ರಾಪ್​ಡೌನ್​ನಿಂದ ತೆಗೆಯುತ್ತಿದ್ದೇವೆ ಎಂದಿದ್ದಾರೆ.

ಹಿಂದಿನ ಸಮೀಕ್ಷೆಯಲ್ಲಿ ಏನಿತ್ತೋ ಅದನ್ನೇ ಅಳವಡಿಸಿಕೊಂಡಿದ್ದೇವೆ. ಜಾತಿಗಳ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಿ ಆಕ್ಷೇಪಣೆಗೂ ಆಹ್ವಾನಿಸಿದ್ದೆವು. ಬಹಳಷ್ಟು ಜನ ಜಾತಿ ಬಿಟ್ಟುಹೋಗಿದೆ ಅಂತ ಲಿಖಿತವಾಗಿ ನೀಡಿದ್ದರು. ಇದಾದ ಬಳಿಕ 148 ಜಾತಿಗಳನ್ನು ನಾವು ಸೇರ್ಪಡೆ ಮಾಡಿದ್ದು, 1413 ಜಾತಿಗಳು ಮೊದಲೇ ಇತ್ತು. ಇದೀಗ ನಾವು 1561 ಜಾತಿಗಳನ್ನು ಪಟ್ಟಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ