ಜಾತಿವಾರು ಗಣತಿ ಸಮೀಕ್ಷೆ ಗಡುವು ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ 3 ದಿನ ದೀಪಾವಳಿ ರಜೆ

Sampriya

ಸೋಮವಾರ, 20 ಅಕ್ಟೋಬರ್ 2025 (11:06 IST)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಡುವನ್ನು ಮತ್ತೆ ವಿಸ್ತರಿಸಲಾಗಿದೆ. ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ..

ಸೆಪ್ಟೆಂಬರ್ 22 ರಂದು (ಜಿಬಿಎ ಪ್ರದೇಶವನ್ನು ಹೊರತುಪಡಿಸಿ) ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರದೇಶವನ್ನು ಹೊರತುಪಡಿಸಿ ರಾಜ್ಯದಾದ್ಯಂತ ಸುಮಾರು 1.43 ಕೋಟಿ ಕುಟುಂಬಗಳಲ್ಲಿ 5.42 ಕೋಟಿ ಜನರ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಬೆಂಗಳೂರಿನಲ್ಲಿ 56.56 ಲಕ್ಷ ಜನರಿದ್ದು, 18.31 ಲಕ್ಷ ಕುಟುಂಬಗಳನ್ನು ಗಣತಿದಾರರು ಸಂಪರ್ಕಿಸುವುದರೊಂದಿಗೆ ಒಟ್ಟಾರೇ 39.83 ಲಕ್ಷ ಜನರ ಸಮೀಕ್ಷೆ ಕಾರ್ಯ ಆಗಿದ್ದು, ಶೇ. 45. 97 ರಷ್ಟು ಪ್ರಗತಿ ಆಗಿದೆ.

ರಾಜ್ಯ ಸರ್ಕಾರವು ದೀಪಾವಳಿಯ ನಿಮಿತ್ತ ಅಕ್ಟೋಬರ್ 20 ರಿಂದ ಅಕ್ಟೋಬರ್ 22 ರವರೆಗೆ ಸಮೀಕ್ಷೆಯಲ್ಲಿ ಭಾಗವಹಿಸುವ ಎಲ್ಲರಿಗೂ ರಜಾದಿನಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಪುನಃ ಪ್ರಾರಂಭವಾಗಲಿದೆ. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ