ಡಿ.18 ವರೆಗೆ ಜಾನುವಾರು ಸಾಗಾಟ ನಿಷೇಧ!

ಶನಿವಾರ, 17 ಡಿಸೆಂಬರ್ 2022 (07:40 IST)
ಕಾರವಾರ : ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ಜಾನುವಾರು ಚರ್ಮಗಂಟು ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಆವರಿಸಿದ್ದು ಗೋವುಗಳನ್ನು ಬಲಿಪಡೆಯುತ್ತಿದೆ.

ಜಾನುವಾರುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ದಿನದಿಂದ ದಿನಕ್ಕೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಲ್ಬಣಗೊಳ್ಳುತ್ತಿದೆ.

ರೈತರ ಒಡನಾಡಿ ಗೋವುಗಳಿಗೆ ಚರ್ಮಗಂಟು ರೋಗ ಹರಡುತ್ತಿದೆ. ಆರಂಭದಲ್ಲಿ ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಗೂ ವ್ಯಾಪಿಸಿದೆ.

ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು 110ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಒಟ್ಟು 434 ಹಳ್ಳಿಗಳಲ್ಲಿ 2,500ಕ್ಕೂ ಹೆಚ್ಚು ಜಾನುವಾರುಗಳಲ್ಲಿ ರೋಗ ಕಾಣಿಸಿಕೊಂಡಿದೆ. ಸದ್ಯ 1,000 ಜಾನುವಾರುಗಳು ಗುಣಮುಖವಾಗಿದ್ದು, ಲಕ್ಷದಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ