ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ?

ಮಂಗಳವಾರ, 20 ಸೆಪ್ಟಂಬರ್ 2016 (19:07 IST)
ಸುಪ್ರೀಂಕೋರ್ಟ್ ತೀರ್ಪು ಪಾಲನೆ ಮಾಡಲು ಕಷ್ಟ ಅಗುವುದರಿಂದ ರಾಜೀನಾಮೆ ನೀಡಲು ಸಿದ್ದವಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಹೈಕಮಾಂಡ್‌ಗೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ಈಗಾಗಲೇ ಅಗತ್ಯಕ್ಕಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಮತ್ತಷ್ಟು ನೀರು ಬಿಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು, ತಾವು ತೆಗೆದುಕೊಳ್ಳುವ ಯಾವುದೇ ಸೂಕ್ತ ನಿರ್ದಾರಕ್ಕೆ ಹೈಕಮಾಂಡ್ ಬದ್ಧವಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಯಾವ ತೀರ್ಮಾನವಾಗಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ