ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀರು ಬಿಡುವ ವಿಚಾರ ಕುರಿತು ಚರ್ಚಿಸಲು ಇಂದು ಮತ್ತೆ ವಿಧಾನಮಂಡಲ ಅಧಿವೇಶನ ಕರೆಯಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ಇದೀಗ ನೀರು ಬಿಡಲೇಬೇಕಾದ ಸ್ಥಿತಿ ರಾಜ್ಯಕ್ಕೆ ಎದುರಾಗಿದೆ. ಹೀಗಾಗಿ ಸರಕಾರ ಮತ್ತೆ ವಿಧಾನಮಂಡಲ ಅಧಿವೇಶನ ಕರೆಯಲಾಗಿದೆ.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ನಿರ್ಣಯ ಕೈಗೊಂಡ ಮೇಲೆ ಸುಪ್ರೀಂಕೋರ್ಟ್ ನೀರು ಬಿಡಿ ಎಂದು ರಾಜ್ಯ ಸರಕಾರಕ್ಕೆ ಎರಡು ಬಾರಿ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುವ ಸನ್ನಿವೇಶ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಹೀಗಾಗಿ ಸರಕಾರ ಮತ್ತೆ ವಿಧಾನಮಂಡಲ ಅಧಿವೇಶನ ಕರೆದು ಚರ್ಚೆ ನಡೆಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ