ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಬೆಂಗಳೂರು, ಮಂಡ್ಯದಲ್ಲಿ ತೀವ್ರ ಕಟ್ಟೆಚ್ಚರ

ಮಂಗಳವಾರ, 20 ಸೆಪ್ಟಂಬರ್ 2016 (10:51 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ನಗರದಾದ್ಯಂತ ಕೇಬಲ್ ಸಂಪರ್ಕ ಕಡಿತಗೊಳಿಸಲಾಗಿದೆ. 
 
ಮಂಡ್ಯ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಮದ್ದೂರು, ಪಾಂಡವಪುರ ಸೇರಿದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 
 
ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಕಳೆದ ರಾತ್ರಿ ಪ್ರತಿಭಟನೆಗೆ ಮುಂದಾಗಿದ್ದ ಬಿಜೆಪಿಯ ಸಿದ್ದರಾಜು ಹಾಗೂ ಕನ್ನಡ ಸೇನೆಯ ಮಂಜುನಾಥ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದು, ಮುಂಜಾಗ್ರತ ಕ್ರಮವಾಗಿ ಪೊಲೀಸರು ಹಲವು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ