ಕಾವೇರಿ ವಿವಾದದ ಮುಂದಿನ ವಿಚಾರಣೆ ಸೆ.20ಕ್ಕೆ: ಶಾಂತಿ ಕಾಪಾಡಲು ಉಭಯ ರಾಜ್ಯಗಳಲ್ಲಿ ಸುಪ್ರೀಂ ಮನವಿ

ಸೋಮವಾರ, 19 ಸೆಪ್ಟಂಬರ್ 2016 (11:47 IST)
ಕಾವೇರಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್‌ನ ವಿಶೇಷ ದಳ ಸೆಪ್ಟೆಂಬರ್ 20ರಂದು ಮತ್ತೊಂದು ಸುತ್ತಿನ ವಿಚಾರಣೆ ನಡೆಸಲಿದೆ. ಈ ಹಿಂದೆ ನೀಡಿರುವ ತೀರ್ಪಿನಿಂದ ಉಭಯ ರಾಜ್ಯಗಳಲ್ಲಿ ಉಂಟಾಗಿದ್ದ ಹಿಂಸಾಚಾರವನ್ನು ಉಲ್ಲೇಖಿಸಿದ ಕೋರ್ಟ್ ಎರಡೂ ರಾಜ್ಯಗಳಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದೆ.  
ಉಭಯ ರಾಜ್ಯಗಳ ಜನರು ತಮ್ಮ ಅಸಮಾಧಾನವನ್ನು ಕಾನೂನು ಕೈಗೆತ್ತಿಗೊಳ್ಳುವ ಮೂಲಕ ತೋರಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇನ್ನೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಇಲಾಖೆಗಳ ನಿರ್ದೇಶನ ನೀಡಿದೆ. 

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರು ಯಾವುದೇ ಪ್ರದೇಶದಲ್ಲಿ ಹಿಂಸಾಚಾರವಾಗದಂತೆ ಉಭಯ ರಾಜ್ಯಗಳು ಮುನ್ನಚ್ಚರಿಕೆ ಕ್ರಮ ವಹಿಸಬೇಕು. ಎರಡೂ ರಾಜ್ಯದ ಜನತೆ ಶಾಂತಿ ಕಾಪಾಡಿಕೊಂಡು ನ್ಯಾಯಾಂಗ ವ್ಯವಸ್ಥೆಗೆ ಗೌರವ ಸಲ್ಲಿಸಬೇಕು ಎಂದು ಕೇಳಿಕೊಂಡರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ