ಕಾವೇರಿ ವಿವಾದ: ಇಂದು ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ

ಮಂಗಳವಾರ, 18 ಅಕ್ಟೋಬರ್ 2016 (11:30 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಇಂದು ಮೂಲ ಅರ್ಜಿ ವಿಚಾರಣೆಗೆ ಬರಲಿದೆ. 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. 
ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂಲ ಅರ್ಜಿಯ ವಿಚಾರಣೆ ನಡೆಸಲಿದೆ.
 
2007 ಫೆಬ್ರುವರಿ 5 ರಂದು ನ್ಯಾಯಾಧೀಕರಣ ನೀಡಿದ್ದ ಅಂತಿಮ ತೀರ್ಪಿನಲ್ಲಿ ನೀರಿನ ಹಂಚಿಕೆ ಪ್ರಕಾರ ತಮಿಳುನಾಡಿಗೆ ವಾರ್ಷಿಕ 419 ಟಿಎಂಸಿ ನೀರು ಹರಿಸುವಂತೆ ಸೂಚಿಸಿತ್ತು. ಕರ್ನಾಟಕಕ್ಕೆ ವಾರ್ಷಿಕ 270 ಟಿಎಂಸಿ ನೀರು ಕೇರಳಕ್ಕೆ 30 ಟಿಎಂಸಿ ಹಾಗೂ ಪುದುಚೇರಿಗೆ 7 ಟಿಎಂಸಿ ನೀರು ನೀಡುವಂತೆ ಸೂಚಿಸಿತ್ತು. 
 
ಆದ್ರೆ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಪಾಲುದಾರ ರಾಜ್ಯಗಳಾದ ಕರ್ನಾಟಕ, ತಮಿಳನಾಡು, ಕೇರಳ ವಿಶೇಷ ಮೇಲ್ಮನವಿ ಸಲ್ಲಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ