ಕಾವೇರಿ ವಿವಾದ ಅಂತಿಮ ತೀರ್ಪು ಇಂದು! ಏನಾಗುತ್ತೋ ಎಂಬ ಆತಂಕ!

ಸೋಮವಾರ, 5 ಫೆಬ್ರವರಿ 2018 (11:00 IST)
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದ್ದು, ಈ ಸಂಬಂಧ ಕೆಆರ್ ಎಸ್ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.
 

ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಆರ್ ಎಸ್ ಜಲಾಶಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮರಾಗಳನ್ನೂ ಅಳವಡಿಸಲಾಗಿದೆ. ಹಾಗೆಯೇ ಶಾಂತಿಯುತವಾಗಿ ಪ್ರತಿಭಟನೆಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಜಿ ರೂಪಾ ಹೇಳಿದ್ದಾರೆ.

ಕಳೆದೆರಡು ದಶಕಗಳಿಂದ ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ಸಾಕಷ್ಟು ವಿವಾದ ಸೃಷ್ಟಿಯಾಗಿದೆ. ಈ ಎಲ್ಲಾ ವಿವಾದಗಳಿಗೆ ತೆರೆ ಎಳೆಯಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದಿರುವ ಸುಪ್ರೀಂ ಕೋರ್ಟ್ ನಲ್ಲಿ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಮತ್ತೆ ಕಟ್ಟೆಚ್ಚರ ವಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ