ಕಾವೇರಿ ವಿವಾದ: ಸೂಪರ್ ಸ್ಟಾರ್ ರಜನೀಕಾಂತ್ ಗೆ ರೆಬಲ್ ಸ್ಟಾರ್ ಅಂಬರೀಷ್ ತಿರುಗೇಟು!
ಶನಿವಾರ, 17 ಫೆಬ್ರವರಿ 2018 (16:38 IST)
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಸೂಪರ್ ಸ್ಟಾರ್ ರಜನೀಕಾಂತ್ ವಿರುದ್ಧ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ತೀರ್ಪಿನಿಂದ ತಮಿಳುನಾಡಿಗೆ ಅನ್ಯಾಯವಾಗಿದೆ. ಮೇಲ್ಮನವಿ ಸಲ್ಲಿಸಬೇಕು ಎಂದಿದ್ದ ರಜನೀಕಾಂತ್ ಗೆ ರೆಬಲ್ ಸ್ಟಾರ್ ಅಂಬರೀಷ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಷ್ ‘ಕೋರ್ಟ್ ಗೆ ಹೋಗಿ ಮೇಲ್ಮನವಿ ಸಲ್ಲಿಸಲಿ ಆಗ ಗೊತ್ತಾಗುತ್ತದೆ’ ಎಂದಿದ್ದಾರೆ. ಅಷ್ಟೇ ಅಲ್ಲ, ಮೂಲತಃ ಕನ್ನಡಿಗರಾದ ರಜನೀಕಾಂತ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ