ಕಾವೇರಿಗಾಗಿ ದೇವರ ಮೊರೆ ಹೋದ ವಾಟಾಳ್

ಶನಿವಾರ, 24 ಸೆಪ್ಟಂಬರ್ 2016 (13:08 IST)
ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ದೇವರ ಮೊರೆ ಹೋಗಿದ್ದಾರೆ.
 
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿರುವ ಗಣೇಶನ ದೇವಸ್ಥಾನಕ್ಕೆ ಕೇಸರಿ ಶಾಲು ಹಾಗೂ ಪಂಚೆ ತೋಟ್ಟು ಪೂಜಾರಿಯಂತೆ ಬಂದ ವಾಟಾಳ್ ನಾಗಾರಾಜ್ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಉಭಯ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಉಭಯ ರಾಜ್ಯಗಳಲ್ಲಿ ಹೋರಾಟ ಮುಂದುವರೆದಿದೆ. ಆದರೆ, ಕಾವೇರಿ ವಿವಾದ ಇತ್ಯರ್ಥವಾಗುತ್ತಿಲ್ಲ ಎಂದು ವಾಟಾಳ್ ನಾಗರಾಜ್ ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಸುತ್ತಿರುವ 3 ಸಾವಿರ ಕ್ಯೂಸೆಕ್ ನೀರು ಸಾಂಬಾ ಬೆಳೆಗೆ ಸಾಕಾಗಲ್ಲ. ತಮಿಳುನಾಡಿಗೆ ಸೆಪ್ಟೆಂಬರ್ ಅಂತ್ಯದೊಳಗೆ 17.5 ಟಿಎಂಸಿ ನೀರಿನ ಅಗತ್ಯವಿದೆ ಎಂದು ತಮಿಳುನಾಡು ಸರಕಾರ  ಕಾವೇರಿ ಮೇಲುಸ್ತುವಾರಿ ಸಮಿತಿ ತೀರ್ಮಾನ ವಿರೋಧಿಸಿ ನಿನ್ನೆ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಆಕ್ಷೇಪಣೆ ಎತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ