ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲುಸ್ತುವಾರಿ ಸಮಿತಿ ಸಭೆಯ ತೀರ್ಪಿನಿಂದ ರಾಜ್ಯಕ್ಕೆ ಹಿನ್ನೆಡೆಯಾದರೇ ನ್ಯಾಯಾಂಗ ನಿಂದನೆ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಿದ್ಧವಿರಬೇಕು. ಯಾವುದೇ ಕಾರಣಕ್ಕೂ ರೈತರ ಹಿತ ಬಲಿ ಕೊಟ್ಟು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.
ಕಾವೇರಿ ಗಲಭೆ ಹಿಂದೆ ಆರ್‌ಎಸ್‌ಎಸ್ ಆರೋಪ.....
ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳುತ್ತಾರೆ. ಈಗ ನಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುತ್ತಾರೆ. ಸಂಘಟನೆಯ ಕುರಿತು ತಿಳಿದುಕೊಳ್ಳದೇ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚೀಟ್.....
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ್ಯ ಆರೋಪಿಯಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕೈ ಬಿಡಲಾಗಿದೆ. ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರ ಕೊಲೆಗಡುಕರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.