ಕಾವೇರಿ ವಿವಾದ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಬಿ.ಎಸ್.ಯಡಿಯೂರಪ್ಪ
ಮಂಗಳವಾರ, 27 ಸೆಪ್ಟಂಬರ್ 2016 (17:12 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಏನೇ ನಿರ್ಧಾರ ಕೈಗೊಂಡರು ಅದಕ್ಕೆ ಬದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ನೀಡುವ ತೀರ್ಪಿನಿಂದ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾವೇರಿ ನದಿಯಿಂದ ನಾಳೆ ಹಾಗೂ ನಾಡಿದ್ದು 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ ಎಂದರು.
ಈ ಕುರಿತು ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಅನಂತ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ