ಕಾವೇರಿ ನಿರ್ವಹಣಾ ಮಂಡಳಿ ರಚನೆ ರಾಜ್ಯಕ್ಕೆ ಮಾರಕ; ಯಡಿಯೂರಪ್ಪ

ಶುಕ್ರವಾರ, 30 ಸೆಪ್ಟಂಬರ್ 2016 (18:38 IST)
ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಮಾರಕವಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಏನು ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾಕ್ಕೆ ಸಂಬಂಧಿಸಿದಂತೆ ಬದಲಿ ನ್ಯಾಯಪೀಠಕ್ಕೆ ಹೋಗಿ ಎಂದು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದೆ. ಆದರೆ, ಅವರು ನಮ್ಮ ಸಲಹೆಯನ್ನು ಪರಿಗಣಿಸಲಿಲ್ಲ. ಈಗ ಸಾಂವಿಧಾನಿಕ ಪೀಠದ ಮುಂದೆ ಹೋಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದೀಗ ನ್ಯಾಯಲಯದ ಆದೇಶ ಪಾಲಿಸಲೇಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
 
ಕಾವೇರಿ ವಿಚಾರದಲ್ಲಿ ಇಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಆಘಾತ ತಂದಿದೆ. ಆದರೆ, ಕರ್ನಾಟಕ ಪರ ವಕೀಲ ನಾರಿಮನ್ ನಿಲುವು ಏನು ಎನ್ನುವುದು ಗೊತ್ತಾಗಲಿಲ್ಲ. ರಾಜ್ಯ ಸರಕಾರ ಮೊದಲೇ ಸಾಂವಿಧಾನಿಕ ಪೀಠದ ಎದುರು ಹೋಗಿದ್ದರೆ ಈ ಗಂಡಾಂತರದಿಂದ ಪಾರಾಗಬೇಕಿತ್ತು ಎಂದು ಹೇಳಿದರು.
 
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೇವೆ. ಸಭೆಯಲ್ಲಿ ಎಲ್ಲಾ ವಿಷಯಗಳ ಕುರಿತು ಚರ್ಚಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ