ಮಂಡ್ಯ: ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು, ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ.
ಇದೀಗ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿದಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಬೇಸರ ಸುದ್ದಿಯಿದೆ.
ಹೌದು ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 19ರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.