ಕಾವೇರಿ ಗಲಭೆ: ಕೇಂದ್ರ, ರಾಜ್ಯಕ್ಕೆ ಮಾನವ ಹಕ್ಕು ಆಯೋಗ ನೋಟಿಸ್ ಜಾರಿ

ಶುಕ್ರವಾರ, 21 ಅಕ್ಟೋಬರ್ 2016 (14:44 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಚ್‌.ಎಲ್.ದತ್ತು, ಕಾವೇರಿ ವಿವಾದ ಕುರಿತು ರಾಜ್ಯದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್‌ಗೆ ಉತ್ತರ ನೀಡಲು ಕರ್ನಾಟಕ ಸರಕಾರ ಸಮಯಾವಕಾಶ ಕೇಳಿದೆ. ಹೀಗಾಗಿ ಕರ್ನಾಟಕ ಸರಕಾರಕ್ಕೆ ಹೆಚ್ಚಿನ ಸಮಯಾವಕಾಶ ನೀಡಿದ್ದೇವೆ ಎಂದು ಹೇಳಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸುಪ್ರೀಂ ಆದೇಶ ವಿರೋಧಿಸಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನಾಕಾರಾರ ಆಕ್ರೋಶ ಮುಗಿಲು ಮುಟ್ಟಿತ್ತು. ಈ ವೇಳೆ ಹಲವು ಪ್ರದೇಶದಲ್ಲಿ ಹಿಂಸಾಚಾರ ಕೃತ್ಯಗಳು ನಡೆದಿದ್ದು, ಅನೇಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 
 
ಸಿಎಂ ಜಯಲಲಿತಾ ಕುರಿತ ವದಂತಿ.....
 
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಕುರಿತು ವದಂತಿ ಹಬ್ಬಿಸಿದವರನ್ನು ಬಂಧಿಸುವುದೊಂದೆ ಉತ್ತರವಲ್ಲ. ವದಂತಿ ಹರಡದಿರುವಂತೆ ಅನೇಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಹೆಚ್ಚಿನ ಅಧಿಕಾರ ಅಗತ್ಯವಿದೆ. ಮಾಧ್ಯಮ ವರದಿ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಕೊಂಡಿದ್ದೇವೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಚ್‌.ಎಲ್.ದತ್ತು ಹೇಳಿದರು. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ