ಈ ಮಹತ್ವದ ಸರ್ವಪಕ್ಷ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಕುರಿತು ಚರ್ಚೆ ನಡೆಯಲಿದ್ದು, ಸಂಸದರು, ವಿಧಾನಮಂಡಲದ ಉಭಯ ಸದನ ನಾಯಕರು, ಕಾವೇರಿ ಜಲಾಯನ ಪ್ರದೇಶದ ಶಾಸಕರು ಹಾಗೂ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಎರಡು ದಿನಗಳ ಅವಧಿಯಲ್ಲಿ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.