ಸಿಬಿಐನಿಂದ ಜಾರ್ಜ್ ವಿರುದ್ಧ ಎಫ್‌ಐಆರ್: ಮೂವರು ಸಚಿವರೊಂದಿಗೆ ಸಿಎಂ ಚರ್ಚೆ
ಗುರುವಾರ, 26 ಅಕ್ಟೋಬರ್ 2017 (20:52 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಮೂವರು ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಸಿ.ಮಹಾದೇವಪ್ಪ ಮತ್ತು ಕೆ.ಜೆ.ಜಾರ್ಜ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಸಿಬಿಐ ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರಿಂದ ವಿಪಕ್ಷಗಳು ಜಾರ್ಜ್ ರಾಜೀನಾಮೆಗೆ ಒತ್ತಾಯ ಹೇರುವುದು ಖಚಿತ. ಇಲ್ಲವೇ ಪ್ರತಿಭಟನೆಗೆ ಮುಂದಾದಲ್ಲಿ ಅದನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ವಿಪಕ್ಷಗಳಿಗೆ ಟಾಂಗ್ ನೀಡಲು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ಕೂಡಾ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.