ನಕಲಿ ಡೈರಿ ಬಗ್ಗೆ ಸಿಬಿಐ ತನಿಖೆಯಾಗಲಿ: ಲೆಹರ್ ಸಿಂಗ್

ಭಾನುವಾರ, 26 ಫೆಬ್ರವರಿ 2017 (14:30 IST)
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಬಹಿರಂಗವಾದ ಡೈರಿಯ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಬಿಜೆಪಿ ಮುಖಂಡ, ಯಡಿಯೂರಪ್ಪ ಆಪ್ತ ಲೆಹರ್ ಸಿಂಗ್ ಒತ್ತಾಯಿಸಿದ್ದಾರೆ.
 
ನಗರದಲ್ಲಿ ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಖಜಾಂಚಿ, ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ಡೈರಿಯಲ್ಲಿ ನನ್ನ ಸಹಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಡೈರಿಯ ಬಗ್ಗೆ ತನಿಖೆ ನಡೆಸಲು ಆದೇಶಿಸುವಂತೆ ಗೃಹ ಸಚಿವ ಪರಮೇಶ್ವರ್ ಅವರನ್ನು ಸಂಪರ್ಕಿಸುವುದಾಗಿ ತಿಳಿಸಿದ್ದಾರೆ.
 
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಿನ್ನೆ ನನ್ನ ಹೆಸರಲ್ಲಿ ಡೈರಿ ಬಿಡುಗಡೆ ಮಾಡಿದ್ದಾರೆ. ಆದರೆ, ಅದು ನನ್ನ ಡೈರಿಯಲ್ಲಿ ನಕಲಿ ಡೈರಿಯಾಗಿದೆ. ನಕಲಿ ಡೈರಿಯ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
 
ವಿಧಾನಪರಿಷತ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ನನ್ನ ಆತ್ಮಿಯ ಮಿತ್ರರಾಗಿದ್ದು, ನಕಲಿ ಡೈರಿಯ ಬಗ್ಗೆ ತನಿಖೆ ನಡೆಸುತ್ತಾರೆ ಎನ್ನುವ ವಿಶ್ವಾಸವಿದೆ. ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಲೆಹರ್ ಸಿಂಗ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ