ಬೆಂಗಳೂರು : ಸಹಕಾರಿ ಬ್ಯಾಂಕ್ಗಳ ಅಕ್ರಮ ತನಿಖೆಯನ್ನು ಸಿಬಿಐಗೆ ಸರ್ಕಾರ ವಹಿಸಲಿದೆ. 2-3 ದಿನಗಳಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಪ್ರಶ್ನೆ ಕೇಳಿದರು. ಈ ಸರ್ಕಾರ ಸಹಕಾರಿ ಬ್ಯಾಂಕ್ಗಳ ಅಕ್ರಮದ ಪ್ರಕರಣದಲ್ಲಿ ಸುಳ್ಳು ಹೇಳುತ್ತಿದೆ. ಸಿಬಿಐಗೆ ಕೇಸ್ ಕೊಡುವುದಕ್ಕೆ ಹಿಂದೇಟು ಹಾಕುತ್ತಿದೆ. ಕೂಡಲೇ ಸಿಬಿಐ ತನಿಖೆಗೆ ಪ್ರಕರಣ ಕೊಡುವಂತೆ ಆಗ್ರಹ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಎಸ್.ಟಿ. ಸೋಮಶೇಖರ್, ಗುರು ರಾಘವೇಂದ್ರ ಬ್ಯಾಂಕ್, ಗುರುಸಾರ್ವಭೌಮ ಸಹಕಾರಿ ಬ್ಯಾಂಕ್, ವಶಿಷ್ಠ ಕ್ರೆಡಿಟ್ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಲು ಸಹಕಾರ ಸಂಘಗಳ ನಿಬಂಧಕರು ಶಿಫಾರಸು ಮಾಡಿದ್ದಾರೆ. ಈ ಮೂರು ಬ್ಯಾಂಕ್ನಲ್ಲಿ ದೊಡ್ಡ ಅಕ್ರಮ ಆಗಿದೆ.